ಭಾರತ್ ಬಂದ್ ವೇಳೆ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಕಾರರು

(ನ್ಯೂಸ್ ಕಡಬ) newskadaba.c0m ಪಾಟ್ನಾ, ಆ. 22.  ಭಾರತ್‌ ಬಂದ್‌ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ ಗೋಪಾಲ್‌ ಗಂಜ್‌ನಲ್ಲಿ ನಡೆದಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪನ್ನು ಖಂಡಿಸಿ ಹಲವು ದಲಿತ ಸಂಘಟನೆಗಳು ಭಾರತ್‌ ಬಂದ್‌ಗೆ ಕರೆ ನೀಡಿದ್ದವು. ಬಂದ್‌ ವೇಳೆ ಬಿಹಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮಕ್ಕಳಿದ್ದ ಶಾಲಾ ಬಸ್‌ ರಸ್ತೆಯಲ್ಲಿ ಬಂದಿದೆ. ಶಾಲಾ ಬಸ್ಸನ್ನು ನೋಡಿದ ಕೂಡಲೇ ಸುತ್ತುವರೆದ ಪ್ರತಿಭಟನಾಕಾರರು ಚಕ್ರದ ಅಡಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ.

Also Read  HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ

 

 

error: Content is protected !!
Scroll to Top