(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 22. ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಸಹ ಭರವಸೆ ನೀಡಿದೆ.
ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣದ ಪ್ರತಿಭಟನೆಗೆ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ನಾಗ್ಪುರದ ಏಮ್ಸ್ ನಿವಾಸಿ ವೈದ್ಯರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದರು.