ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!    

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಯಾರೇ ಬೈದರೂ ನೀರಿನ ದರ ಏರಿಕೆ ಮಾಡುವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ, ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದೆ.

ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ದರ್ಪದ ಮಾತುಗಳನ್ನು ಆಡುತ್ತಿದ್ದಾರೆ. ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗ ಮಾಡುತ್ತಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ‘ಬೀದಿಗಿಳಿಯುವ ಕಾಲ ದೂರವಿಲ್ಲ’ ಎಂಬುವುದಾಗಿ ಬಿಜೆಪಿ ಉಲ್ಲೇಖಿಸಿದೆ.

Also Read  ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ

 

 

error: Content is protected !!
Scroll to Top