ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಪಾರ್ಮಸಿ, ಕೃಷಿ ವಿಜ್ಞಾನ, MBA, MCA, LLB ಕೋರ್ಸ್‍ಗಳಿಗೆ ರೂ.50,000/-ರಿಂದ ರೂ.5,00,000/-ದವರೆಗೆ ನೀಡಲಾಗುವುದು. ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in  ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ  ಮೊತ್ತದ 12% ರಷ್ಟು ಆನ್‍ಲೈನ್ ಮುಖಾಂತರ ಮರು ಪಾವತಿಸಬೇಕಾಗಿರುತ್ತದೆ.

 

Also Read  ಪ್ರಥಮ ಪಿಯು ಫಲಿತಾಂಶ ಪ್ರಕಟ ➤ ಫಲಿತಾಂಶ ತಿಳಿಯಲು ಕ್ಲಿಕ್??ಮಾಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಈ ಹಿಂದೆ ಆಯ್ಕೆಯಾಗಿ ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ಮೌಲಾನಾ ಅಜಾದ್ ಭವನ 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ತಾಲೂಕು-575001 ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8277799990 ಮತ್ತು ನಿಗಮದ ವೆಬ್‍ಸೈಟ್ https://kmdconline.karnataka.gov.in ಸಂಪರ್ಕಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನಾಪೊಕ್ಲು: ಜಮಾಅತ್ ಅಧ್ಯಕ್ಷರ ಹತ್ಯೆ ಪ್ರಕರಣ ➤ ಓರ್ವನ ಬಂಧನ

 

error: Content is protected !!
Scroll to Top