ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ವಿಶ್ವವಿದ್ಯಾನಿಲಯ, ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳಗಂಗೋತ್ರಿ ಇವರ ಸಹಭಾಗಿತ್ವದೊಂದಿಗೆ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಲ್ ಧರ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಕಟಣೆ ತಿಳಿಸಿದೆ.

Also Read  ಶಾಲಾ ಮಕ್ಕಳಿಗೆ ಸಿಹಿಸುದ್ದಿ ➤ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಣೆ!

error: Content is protected !!
Scroll to Top