ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್             

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿರುವುದಷ್ಟೇ ಅಲ್ಲದೇ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ಪುನಃ ವಿಸ್ತರಣೆ ಮಾಡಿದೆ.

ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತ್ತು. ಈ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ನೋಟಿಸ್ ನೀಡದೆ ಪೊಲೀಸರು ಕ್ರಮಕ್ಕೆ ಮುಂದಾದ ಹಿನ್ನೆಲೆಯಲ್ಲಿ ಸ್ಥಳೀಯ ಚುನಾಯಿತ ಜನಪ್ರತಿನಿಧಿಯಾಗಿ ಅರ್ಜಿದಾರರು ಠಾಣೆಗೆ ಹೋಗಿ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾರೆ.

Also Read  ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷರಾಗಿ ತಿರುಮಲೇಶ್ವರ ಸಾಕೋಟೆ ಆಯ್ಕೆ

 

error: Content is protected !!
Scroll to Top