ಪುತ್ತೂರು: ಚೂರಿ ಇರಿತ ಆರೋಪ; ವಿದ್ಯಾರ್ಥಿನಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, . 23. ನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ ಎಂದು ಸುಳ್ಳು ಆರೋಪ ಹೊರಿಸಿದ ವಿದ್ಯಾರ್ಥಿನಿಯನ್ನು ಅಮಾನತು ಮಾಡುವಂತೆ ಕೋರಿ ವಿದ್ಯಾರ್ಥಿ ಸಂಘಟನೆಯು ಕಾಲೇಜಿನ ಪ್ರಾಂಶುಪಾಲ ಹಾಗೂ ಪುತ್ತೂರು ನಗರ ಠಾಣಾಧಿಕಾರಿಗೆ ಮನವಿ ಸಲ್ಲಿಸಿತು.

ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಲ್ಲದೇ ಆರೋಪಿ ಎಂದು ವಿದ್ಯಾರ್ಥಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಘಟನೆ ಒತ್ತಾಯಿಸಿದೆ. ಈ ಕುರಿತು ಪುತ್ತೂರು ಕಾಲೇಜಿನ ವಿದ್ಯಾರ್ಥಿಗಳು ಸಭೆ ನಡೆಸಿದ್ದು, ವಿದ್ಯಾರ್ಥಿನಿಯು ಅದೇ ಕಾಲೇಜಿನ ವಿದ್ಯಾರ್ಥಿಯ ಮೇಲೆ ಸುಳ್ಳು ಆರೋಪ ಹೊರಿಸಿರುವುದನ್ನು ಖಂಡಿಸಿದರು. ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿ ಡಿಸ್ಚಾರ್ಜ್ ಆಗಿದ್ದು, ಮನೆಗೆ ತೆರಳಿದ್ದಾಳೆ. ಬಾಲಕಿಯ ವಿಚಾರಣೆ ಬಳಿಕವಷ್ಟೇ ಸತ್ಯ ಹೊರಬೀಳಲಿದೆ. ವಿಚಾರಣೆ ಪೂರ್ಣಗೊಂಡ ನಂತರ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

Also Read  ಕಡಬ: ಅವಿವಾಹಿತ ಮಹಿಳೆ ನಾಪತ್ತೆ

error: Content is protected !!
Scroll to Top