ವಕೀಲೆ ನೇಣು ಬಗಿದುಕೊಂಡು ಆತ್ಮಹತ್ಯೆ -ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ರಾಮನಗರ, ಆ. 23. ವಕೀಲೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.

 

ಆತ್ಮಹತ್ಯೆ ಮಾಡಿಕೊಂಡ ವಕೀಲೆಯನ್ನು ವಾಸುಕಿ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಾಸುಕಿ ಅವರು, ಗುರುವಾರದಂದು ಸಂಜೆ ಮಾಗಡಿ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top