ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7.00 ರಿಂದ ರಾತ್ರಿ 9.00ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಪಡಿತರ ಚೀಟಿದಾರರು ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಕಾರ್ಡುದಾರರಿಗೆ ರೇಷನ್ ಸ್ಥಗಿಸಗೊಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದಿರುವುದು ಕಾನೂನಿಗೆ ವಿರುದ್ಧವಾಗಿರುತ್ತದೆ. ಆದ್ದರಿಂದ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಪಡೆದುಕೊಂಡಿರುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಪಡಿತರ ಚೀಟಿ ಪಡೆದುಕೊಂಡಿರುವವರು ಕೂಡಲೇ ತಾಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸಲು ತಿಳಿಸಿದೆ.

Also Read  ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                        

error: Content is protected !!
Scroll to Top