‘ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತವಾಗಿ ನೀಟ್ ತರಬೇತಿ’- ಸಚಿವ ಮಧು ಬಂಗಾರಪ್ಪ                              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ ಸರ್ಕಾರ ಖರ್ಚು ಮಾಡುತ್ತಿದ್ದು, ಆನ್​ಲೈನ್​ನಲ್ಲೂ ತರಬೇತಿ ನಡೆಯಲಿದೆ ಎಂದರು.

 

 

error: Content is protected !!

Join the Group

Join WhatsApp Group