ಮೈಸೂರು:  ಹೋಟೆಲ್ ನಲ್ಲಿ ಸ್ಫೋಟಕ ಪತ್ತೆ  ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಯಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.c0m ಮೈಸೂರು, ಆ. 23.  ಸಾಂಸ್ಕೃತಿಕ ನಗರಿ ಮೈಸೂರು ವಿಶ್ವಪ್ರಸಿದ್ಧ ದಸರಾ ಹಬ್ಬಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಹೊತ್ತಿನಲ್ಲಿ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

Also Read  ಮಂಗಳೂರು: ಪಿ.ಎ ಎಂಜಿನಿಯರಿಂಗ್ ಕಾಲೇಜು ಅಧ್ಯಕ್ಷ ಡಾ.ಪಿ.ಎ ಇಬ್ರಾಹಿಂ ಹಾಜಿ ವಿಧಿವಶ

 

 

 

error: Content is protected !!
Scroll to Top