ರಾಜ್ಯಪಾಲರಿಂದ ಸರ್ಕಾರದ 6 ಮಸೂದೆ ರಿಜೆಕ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾಮವೋ ಎಂಬಂತೆ ರಾಜ್ಯಪಾಲರು ಆಗಸ್ಟ್ ಮಾಸದಲ್ಲಿ ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಈ  ಮೂಲಕ ಕಳೆದ ಜನವರಿಯಿಂದ ಇದುವರೆಗೂ ಒಟ್ಟು 11 ವಿಧೇಯಕಗಳನ್ನು ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದಂತಾಗಿದೆ.

ಯಾವ ಮಸೂದೆ ಸರ್ಕಾರಕ್ಕೆ ವಾಪಸ್

1 ಕರ್ನಾಟಕ ಸಾರ್ವಜನಿಕ ಪರೀಕ್ಷಾ(ಭ್ರಷ್ಟಾಚಾರ ತಡೆ) ವಿಧೇಯಕ
2 ಕರ್ನಾಟಕ ಧಾರ್ಮಿಕ ದತ್ತಿ (ತಿದ್ದುಪಡಿ) ವಿಧೇಯಕ
3 ಕರ್ನಾಟಕ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್‌ ವಿಧೇಯಕ
4 ಕರ್ನಾಟಕ ಶಾಸಕಾಂಗ ಸದಸ್ಯರ (ಅನರ್ಹತೆ ತಡೆ) ವಿಧೇಯಕ
5 ಕರ್ನಾಟಕ ಪುರಸಭೆಗಳು ಮತ್ತು ಕೆಲ ಇತರೆ ಕಾನೂನು ವಿಧೇಯಕ
6 ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ
7 ಕರ್ನಾಟಕ ಸಹಕಾರ ಸಂಘಗಳ / (ತಿದ್ದುಪಡಿ) ವಿಧೇಯಕ
8 ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ
9 ರೇಣುಕಾ ಯಲ್ಲಮ್ಮ ದೇವಸ್ಥಾನ 9 ಅಭಿವೃದ್ಧಿ ಪ್ರಾಧಿಕಾರ ವಿಧೇಯಕ
10 ಗದಗ ಬೆಟಗೇರಿ ವ್ಯಾಪಾರ, 10 ಸಂಸ್ಕೃತಿ, ಪ್ರದರ್ಶನ ಪ್ರಾಧಿಕಾರ ವಿಧೇಯಕ
11 ಕರ್ನಾಟಕ ನೋಂದಣಿ (ತಿದ್ದುಪಡಿ) ವಿಧೇಯಕ

error: Content is protected !!

Join the Group

Join WhatsApp Group