(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.24. ರಾಜ್ಯದಲ್ಲಿರುವ ನಿರುದ್ಯೋಗಿ ಯುವ ಜನತೆಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು 3500 ಮಂದಿಗೆ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಈ ಸಂಬಂಧ ವಿಶೇಷ ಯೋಜನೆ ರೂಪಿಸಿ ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆಯನ್ನು ಆರಂಭಿಸಿದೆ.
- ಅಭ್ಯರ್ಥಿ ಬಳಿ ಹಳದಿ ಬ್ಯಾಡ್ಜ್ ಇರಬೇಕು.
- ನಿರುದ್ಯೋಗಿಯಾಗಿರಬೇಕು.
- ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿ ಹೊಂದಿರಬಾರದು.
- ಬಿಪಿಎಲ್ ಕಾರ್ಡ್ ಹೊಂದಿರಬೇಕು.
- ವರ್ಷಕ್ಕೆ 12 ಸಾವಿರ ರೂ. ಆದಾಯ ಮಿತಿಯನ್ನು ಮೀರಿರಬಾರದು.
ಇವಿಷ್ಟು ಅರ್ಹತೆಗಳನ್ನು ನೀವು ಹೊಂದಿದ್ದರೆ ನಿಮಗೂ ಪ್ರಯತ್ನಿಸಬಹುದು. ಆಯಾ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ. ಅಲ್ಲಿ ಕಾರು ವಿತರಣಾ ಪ್ರಕ್ರಿಯೆಯು ನಡೆಯುತ್ತದೆ. ನೀವೂ ನಿರುದ್ಯೋಗಿಗಳಾಗಿದ್ದಲ್ಲಿ ಇಂದೇ ಪ್ರಯತ್ನಿಸಿ.