ಆರ್.ಜಿಕರ್ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್ – ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 23. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂಜಯ್ ರಾಯ್‌ನನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

ಸಂಜಯ್‌ನನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಸೀಲ್ದಾ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಕ್ಕೆ ಕರೆತರಲಾಗಿದ್ದು, ಆರೋಪಿ ಸಂಜಯ್ ರಾಯ್ ನ ಸಿಬಿಐ ಕಸ್ಟಡಿ ಇಂದು ಅಂತ್ಯಗೊಂಡ ಬೆನ್ನಲ್ಲೇ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

Scroll to Top