ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ – News Kadaba

ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 23. ಪ್ರತಿಮಾ ಎಂಬವರಿಗೆ ಸೇರಿದ ಫ್ಯಾನ್ಸಿ ಸ್ಟೋರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ನಲ್ಲಿ ಶುಕ್ರವಾರದಂದು ನಡೆದಿದೆ.

ಪ್ರತಿಮಾರವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ವಸ್ತುಗಳು ಸಹಿತ ಸುಮಾರು 5‌ ಸಾವಿರ ರೂ. ನಗದು ಬೆಂಕಿಗಾಹುತಿಯಾಗಿದೆ. ಅಂಗಡಿ ಮಾಲಕಿ ಪ್ರತಿಮ
ವಿಜೇಂದ್ರ ಅವರು ಮಧ್ಯಾಹ್ನ ಅಂಗಡಿಯಲ್ಲಿದ್ದು ನಂತರ ದೇವಸ್ಥಾನಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ. ಸುಮಾರು 12.45ರ ಹೊತ್ತಿಗೆ ಹೊಗೆ ತುಂಬಿಕೊಂಡದ್ದನ್ನು ಆಸುಪಾಸಿನ ಅಂಗಡಿಯವರು ಹಾಗೂ ಸ್ಥಳಿಯರು ಗಮನಿಸಿ ಅಗ್ನಿಶಾಮಕ ಹಾಗೂ ಪೊಲೀಸರಿಗೆ ತಿಳಿಸಿದ್ದರು. ಅಗ್ನಿ ಶಾಮಕದವರು ಆಗಮಿಸಿದ ವೇಳೆ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 3 ಲಕ್ಷಕ್ಕೂ ಮಿಕ್ಕಿ ನಷ್ಟ ಆಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬೈಂದೂರು ಪೊಲೀಸರು ಆಗಮಿಸಿ ಪರಿಶೀಲಿಸಿದರು

Scroll to Top