(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆ. 26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಹಂಪಕಟ್ಟೆ ನಂದಿನಿ ಸಭಾಭವನ ಸರಕಾರಿ ನೌಕರರ ಸಂಘದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ ಹಮ್ಮಿಕೊಳ್ಳಲಾಗಿದೆ.
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ದಕ್ಷಿಣ ವಿಧಾನ ಸಭಾ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Also Read ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್