(ನ್ಯೂಸ್ ಕಡಬ) newskadaba.c0m ತುಮಕೂರು, ಆ. 24. ಬೆಂಗಳೂರು-ತುಮಕೂರು ನಡುವೆ ಮೆಮು ದೈನಂದಿನ ರೈಲು ಸೇವೆಯನ್ನು ಶೀಘ್ರದಲ್ಲೇ ಪರಿಚಯಿಸಲಾಗುವುದು ಎಂದು ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಈ ರೈಲು ಸಂಚಾರದಿಂದ ವಿಶೇಷವಾಗಿ ಸಾವಿರಾರು ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು ಮತ್ತು ಕಾರ್ಖಾನೆಯ ಉದ್ಯೋಗಿಗಳಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ತುಮಕೂರು ನಿಲ್ದಾಣವನ್ನು ವಿಶ್ವ ದರ್ಜೆಯ ಟರ್ಮಿನಲ್ ಆಗಿ ಮೇಲ್ದರ್ಜೆಗೇರಿಸಲು ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ ಎಂದರು. ರಸ್ತೆ ಮತ್ತು ರೈಲು ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲು ತುಮಕೂರು ನಗರದಲ್ಲಿ ಐದು ರೋಡ್ ಓವರ್ ಬ್ರಿಡ್ಜ್ ಗಳನ್ನು ಅಂದಾಜು 350 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.