ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ. ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದು, ನಂತರ ಇಬ್ಬರು ಸ್ನೇಹಿತರಿಗೆ ಹೇಳಿ ಬಿಯರ್ ಬಾಟಲಿ ತರಿಸಿದ್ದನು. ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ.                  

Also Read  ಧರ್ಮಸ್ಥಳ ಬಜರಂಗದಳ ಮುಖಂಡನಿಂದ ದಲಿತ ವ್ಯಕ್ತಿಯ ಹತ್ಯೆ ➤ ಅಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ಕರ್ನಾಟಕ ತಂಡ ಭೇಟಿ

 

error: Content is protected !!
Scroll to Top