(ನ್ಯೂಸ್ ಕಡಬ) newskadaba.c0m ಕಲಬುರಗಿ, ಆ. 24. ಸರ್ಕಾರಿ ಕಾಲೇಜಿಗೆ ಸೇರಿದ 3 ಎಕರೆ 7 ಗುಂಟೆ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ಮಂಜೂರು ಮಾಡಿರುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿದ್ಯಾರ್ಥಿಗಳ ಭವಿಷ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಸರ್ಕಾರಿ ಕಾಲೇಜಿಗೆ ಸೇರಿದ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ಮಂಜೂರು ಮಾಡುವಂತೆ ಪ್ರಸ್ತಾವೆ ಸಲ್ಲಿಕೆಯಾಗಿದ್ದು, ಈ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಶಿಕ್ಷಣ ತಜ್ಞರು ಹಾಗೂ ಶಿಕ್ಷಣ ಸಂಸ್ಥೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ.