ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 24. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ.

ಬಂಧಿತರನ್ನು ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ಕಾರ್ಡೋಸಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್, ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದು ಅಲ್ತಾಫ್ ಶುಕ್ರವಾರ ಸಂತ್ರಸ್ತೆಗೆ ಕರೆ ಮಾಡಿ ಒಂದು ಕಡೆಗೆ ಬರಲು ಹೇಳಿದ್ದನು. ಅದರಂತೆ ಅಲ್ಲಿಗೆ ಬಂದ ಸಂತ್ರಸ್ತೆಯನ್ನು ಆರೋಪಿ ಅಲ್ತಾಫ್ ಅಪಹರಿಸಿಕೊಂಡು ಹೋಗಿ, ಡ್ರಿಂಕ್ಸ್ ನಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಕೊಟ್ಟಿದ್ದು ಆ ಸಂದರ್ಭದಲ್ಲಿ ಆತ ತನ್ನ ಮೇಲೆ ಅತ್ಯಾಚಾರಿ ಎಸಗಿರುವುದಾಗಿ ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಆರೋಪಿ ಅಲ್ತಾಫ್ ಹಾಗೂ ಡ್ರಿಂಕ್ಸ್ ಅನ್ನು ತಂದುಕೊಟ್ಟ ಸುಧೀರ್ ನನ್ನು ಬಂಧಿಸಿ, ಅವರಿಬ್ಬರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ಅಲ್ತಾಫ್ ಆತನ ಕಾರಿನಲ್ಲಿ ಸಂತ್ರಸ್ತ ಯುವತಿಯನ್ನು ಆಕೆಯ ಮನೆ ಬಳಿ ಬಿಟ್ಟು ಹೋಗಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನು ಕಾರ್ಕಳ ಆಸ್ಪತ್ರೆಯಿಂದ ಮಣಿಪಾಲ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಪ್ರಕರಣದ ಕಾನೂನು ಪ್ರಕ್ರಿಯೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿರುವುದಾಗಿ ವರದಿಯಾಗಿದೆ.

Also Read  ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….!

error: Content is protected !!
Scroll to Top