ಮಂಗಳೂರು: ಫ್ಲಾಟ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ► ಮಹಿಳಾ ಪಿಂಪ್ ಸೇರಿ ಇಬ್ಬರ ಬಂಧನ, ಯುವತಿಯ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.24. ನಗರದ ಫ್ಲ್ಯಾಟೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಗಳನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಯುವತಿಯೋರ್ವಳನ್ನು ರಕ್ಷಿಸಿದ ಘಟನೆ ಶನಿವಾರದಂದು ನಡೆದಿದೆ.

ಬಂಧಿತರನ್ನು ಅಡ್ಯಾರ್ ಪದವು ನಿವಾಸಿ ರಿಯಾಸ್ ಅಹಮ್ಮದ್ (35) ಮತ್ತು ಯುವತಿಯರನ್ನು ಫ್ಲಾಟ್ ನಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸುತ್ತಿದ್ದ ಮಹಿಳಾ ಪಿಂಪ್ ಎಂದು ಗುರುತಿಸಲಾಗಿದೆ. ಇವರು ನಗರದ ಕೊಡಿಯಾಲ್ ಬೈಲ್ ನ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ ಇಬ್ಬರನ್ನು ಬಂಧಿಸಿ, 1800/- ರೂ. ನಗದು, ಮೊಬೈಲ್ ಫೋನ್ ಹಾಗೂ ಒಂದು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಕೊಲ್ಕತ್ತಾ ಮೂಲದ ಯುವತಿಯನ್ನು ರಕ್ಷಿಸಿದ್ದಾರೆ.

Also Read  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

error: Content is protected !!
Scroll to Top