’ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ’  ಬಿಜೆಪಿ ಮಹಿಳಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 26.  ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು ಎಂದಿದ್ದಾರೆ. ಕಾರ್ಕಳದಲ್ಲಿ ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ ಘಟನೆಯನ್ನು ತಕ್ಷಣ ಸಿಬಿಐ ತನಿಖೆಗೆ ಒಪ್ಪಿಸಿ ಘಟನೆಯ ಹಿಂದಿನ ಕಾಣದ ಕೈಗಳನ್ನು ತಕ್ಷಣ ಬಂಧಿಸುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರು ತಕ್ಷಣ ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕೆಎಸ್ಸಾರ್ಟಿಸಿ ಬಸ್ ➤ ಪ್ರಾಯಾಣಿಕರು ಪಾರು

 

error: Content is protected !!
Scroll to Top