ಅಪ್ರತಿಮ ಸುಂದರಿ, ಬಹುಭಾಷಾ ಹಿರಿಯ ನಟಿ ಶ್ರೀದೇವಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.25. ಹಿಂದಿ, ಕನ್ನಡ, ಮಲಯಾಳಂ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಬಹುಭಾಷಾ ತಾರೆ, ಭಾರತೀಯ ಚಿತ್ರರಂಗದ ಹಿರಿಯ ನಟಿ ಶ್ರೀದೇವಿ (54) ಶನಿವಾರ ತಡರಾತ್ರಿ ಹೃದಯಾಘಾತದಿಂದಾಗಿ ವಿಧಿವಶರಾದರು.

ತನ್ನ ಕುಟಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪತಿ ಬೋನಿ ಕಪೂರ್ ಹಾಗೂ ಪುತ್ರಿ ಖುಷಿ ಅವರೊಂದಿಗೆ ಶನಿವಾರದಂದು ದುಬೈಗೆ ತೆರಳಿದ್ದ ಶ್ರೀದೇವಿ ತಡರಾತ್ರಿ ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟರು. 1963ರಲ್ಲಿ ಜನಿಸಿದ್ದ ಇವರು ಬಾಲ್ಯದಲ್ಲಿಯೇ ಚಿತ್ರರಂಗಕ್ಕೆ ಧುಮುಕಿ ಅಪ್ರತಿಮ ಪ್ರತಿಭೆಯನ್ನು ಪ್ರದರ್ಶಿಸಿದ್ದರು. ಕನ್ನಡದ ಭಕ್ತ ಕುಂಬಾರ, ಬಾಲ ಭಾರತ, ಸಂಪೂರ್ಣ ರಾಮಾಯಣ, ಯಶೋಧ ಕೃಷ್ಣ, ಹೆಣ್ಣು ಸಂಸಾರದ ಕಣ್ಣು ಮುಂತಾದ ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರಾಭಿಮಾನಿಗಳ ಪ್ರೀತಿಯನ್ನೂ ಗಳಿಸಿಕೊಂಡಿದ್ದರು‌. ಇವರಲ್ಲಿನ ಕಲೆಯನ್ನು ಗುರುತಿಸಿದ ಕೇಂದ್ರ ಸರ್ಕಾರ 2013ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

Also Read  ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರೇಮಿ.!

error: Content is protected !!
Scroll to Top