ದರ್ಶನ್ ಗೆ ರಾಜಾತಿಥ್ಯದ ಫೊಟೋ ವೈರಲ್- ಏಳು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್ ಕಡಬ) newskadaba.com ಬೆಂಗಳೂರು. 26. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಿರುವ ಫೋಟೋ ವೈರಲ್ ಆಗಿರುವುದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿರುವ ವಿಡಿಯೋ ತುಣುಕು ಕೂಡಾ ವೈರಲ್ ಆಗಿತ್ತು. ಬೆನ್ನಲ್ಲೇ ಜೈಲಿನ ಏಳು ಅಧಿಕಾರಿಗಳನ್ನು ಗೃಹಸಚಿವ ಜಿ. ಪರಮೇಶ್ವರ್ ಅವರು ಸಸ್ಪೆಂಡ್ ಮಾಡಿ ಆದೇಶಿಸಿರುವ ಕುರಿತು ವರದಿಯಾಗಿದೆ.

ಕುರಿತು ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ಸಂಪೂರ್ಣ ವರದಿಯನ್ನು ಕೇಳಿದ್ದೇವೆ. ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ ಫಾರ್ ಮಾಡ್ತೇನೆ. ಪದೇ ಪದೇ ರೀತಿ ಆಗಬಾರದು. ಎಲ್ಲಾ ಬಂಧೀಖಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ರೀತಿಯ ಘಟನೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಮೇಲಧಿಕಾರಿಗಳು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದರೆ ಅವರನ್ನು ತೆಗೆದು ಹಾಕುತ್ತೇವೆ. ವರದಿ ಬಂದ ಬಳಿಕ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Also Read  ಕರೊನಾದಿಂದ ಶತಕದ ಹೊಸ್ತಿಲಲ್ಲಿ ಸಾವಿನ ಸಂಖ್ಯೆ

error: Content is protected !!
Scroll to Top