ವಿಟ್ಲ: ನೇಣುಬಿಗಿದು ಆಟೋಚಾಲಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 26. ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ್ ಶಿವಾಜಿನಗರ (40) ಮೃತ ಎಂದು ಗುರುತಿಸಲಾಗಿದೆ. ಆಟೋ ಚಾಲಕರಾಗಿದ್ದ ರಮೇಶ್ ರವರು ಬಾಡಿಗೆ ಮನೆಯಲ್ಲಿ ವಾಸವಿದ್ದು, ರಮೇಶ್ ರವರ ಮನೆಯ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Also Read  ಉಡುಪಿ: ಮನೆಗೆ ನುಗ್ಗಿದ ಕಳ್ಳರು ➤ 18.35 ಲಕ್ಷ ರೂ ಮೌಲ್ಯದ ನಗ-ನಗದು ಕಳವು

error: Content is protected !!
Scroll to Top