(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26. ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ.
ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು, ‘ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಗ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Also Read ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?!