ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವ – ಕಡಬ ತಹಶೀಲ್ದಾರರ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 26. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಕಡಬ ತಹಶೀಲ್ದಾರರ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಿತು.

ಕಡಬ ತಹಶಿಲ್ದಾರ್ ಪ್ರಭಾಕರ್ ಖಜೂರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ಪಿ ಮೋಹನ್, ರಾಯ್ ಅಬ್ರಹಾಂ, ಉಪ ತಹಶೀಲ್ದಾರ್ ಗೋಪಾಲ್ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ಆಡಳಿತಾಧಿಕಾರಿಗಳು, ಪಟ್ಟಣ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು, ಯಾದವ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು. ಸಿಬ್ಬಂದಿ ಕೌಶಿಕ್ ಸ್ವಾಗತಿಸಿ, ಉದಯಕುಮಾರ್ ಅವರು ವಂದಿಸಿದರು.

Also Read  ಬಂಟ್ವಾಳ ತಾಲೂಕು ಸಾಮಾನ್ಯ ಸಭೆ

error: Content is protected !!
Scroll to Top