ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 26.  ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕಿ ಬಳಿ ನಡೆದಿದೆ.

ಮೃತರನ್ನು ಕೆಂಚನೂರು ಗ್ರಾಮದ ಮೈಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರಿ ಎಂಬುವರ ಪತ್ನಿ ಸುಜಾತ ಆಚಾರ್ತಿ (53) ಎಂದು ಗುರುತಿಸಲಾಗಿದೆ. ಮರ ಬಿದ್ದ ಪರಿಣಾಮ ದನ ಸ್ಥಳದಲ್ಲಿಯೇ ಸಾವನ್ನಪ್ಪಿದೆ ಹಾಗೂ ಸುಜಾತ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಅಲ್ಲಿ ಸುಜಾತ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕಲ್ಮಕಾರು: ಯುವಕ ಆತ್ಮಹತ್ಮಗೆ ಶರಣು

 

 

 

error: Content is protected !!
Scroll to Top