ಸಿಪಿ ಯೋಗೇಶ್ವರ್ ಗೆ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಮನವಿ   ವಿರೋಧ ಪಕ್ಷದ ನಾಯಕ ಆರ್. ಅಶೋಕ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಸಿಪಿ ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ. ಯಾವಾಗ ದೆಹಲಿಗೆ ಹೋಗುತ್ತೇವೆ ಎಂದು ಶೀಘ್ರದಲ್ಲೇ ತಿಳಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ.ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಹೆಚ್. ಡಿ.ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದರು.

Also Read  ಇನ್ಮುಂದೆ ಸುಳ್ಳು ಸುದ್ದಿ ಹಬ್ಬಿಸಿದರೆ ಕೇಸ್ ಫಿಕ್ಸ್ - ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಸಿಎಂ ಗ್ರೀನ್ ಸಿಗ್ನಲ್

 

 

error: Content is protected !!
Scroll to Top