ನಟ ದರ್ಶನ್ ರನ್ನು ಬೇರೆಡೆ ಸ್ಥಳಾಂತರಿಸುವಂತೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ, ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ. ಇದೇ ವೇಳೆ ದರ್ಶನ್ ಮತ್ತು ಇತರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರಕ್ಕೆ ಸೂಚಿಸಿದ್ದಾರೆ. ಕೂಡಲೇ ಬೇರೆ ಜೈಲಿಗೆ ಸ್ಥಳಾಂತರ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Also Read  ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ

error: Content is protected !!
Scroll to Top