‘ವಾಲ್ಮಿಕಿ- ಮುಡಾ ಹಗರಣದ ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ನಾಯಕರು’- ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ         

(ನ್ಯೂಸ್ ಕಡಬ) newskadaba.c0m ಹುಬ್ಬಳ್ಳಿ, ಆ. 26.  ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ದಾಖಲೆಗಳನ್ನು ನಮಗೆ ನೀಡಿದ್ದೇ ಕಾಂಗ್ರೆಸ್​ ನಾಯಕರು ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ‌ ಏನೂ ಇರಲಿಲ್ಲ, ಕಾಂಗ್ರೆಸ್​ನವರೇ ನಮಗೆ ದಾಖಲೆ ಕೊಟ್ಟಿದ್ದಾರೆ ಎಂದು ಹೇಳಿದರು. ದಾಖಲೆ ನಮಗೆ ಯಾರು ಕೊಟ್ಟಿದ್ದಾರೆ ಎಂಬುವುದು ಮುಖ್ಯಮಂತ್ರಿಗಳಿಗೂ ಗೊತ್ತಿದೆ. ಸಿದ್ದರಾಮಯ್ಯ ಅವರು ಮನೆಗೆ ಹೋಗುತ್ತಾರೆ, ಕಾಂಗ್ರೆಸ್​ನಲ್ಲಿ ಹೊಸ ಸಿಎಂ ಬರುತ್ತಾರೆ. ಹೀಗಾಗಿ ಬಿಜೆಪಿ ನಾಯಕರು ಸಿಎಂ ಬದಲಾವಣೆ ಬಗ್ಗೆ ಹೇಳುತ್ತಿದ್ದಾರೆ.

Also Read  ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

error: Content is protected !!
Scroll to Top