ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ 8 ಆಟಗಾರರ ನಿವೃತ್ತಿ ಘೋಷಣೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಭಾರತ ತಂಡದ  ಕ್ರಿಕೆಟ್ ಆಟಗಾರರ ಪೈಕಿ ಇದೀಗ 2024 ರಲ್ಲಿ ನಿವೃತ್ತಿ ಘೋಷಿಸಿದ ಆಟಗಾರರ ಸಂಖ್ಯೆ 8ಕ್ಕೇರಿದೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದರೆ, ಮೂವರು ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್​ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ.

ಶಿಖರ್ ಧವನ್- ಟೀಮ್ ಇಂಡಿಯಾ ತಂಡದ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 24 ರಂದು ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದು, ತಮ್ಮ ಅಧಿಕೃತ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಅಪ್‌ಲೋಡ್‌ ಮಾಡಿರುವ ವಿಡಿಯೋದಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ

ಸೌರಭ್ ತಿವಾರಿ- ಎಡಗೈ ಪ್ಲೇಯರ್ ಸೌರಭ್ ತಿವಾರಿ ಭಾರತದ ಪರ 3 ಏಕದಿನ ಪಂದ್ಯಗಳನ್ನಾಡಿದ್ದು, ಇದೇ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 17 ವರ್ಷಗಳ ತಮ್ಮ ಕ್ರಿಕೆಟ್ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

ವರೋನ್ ಆರೋನ್- ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ವೇಗಿ ವರೋನ್ ಆರೋನ್ ಭಾರತದ ಪರ 9 ಏಕದಿನ ಮತ್ತು 9 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.

Also Read  'ಇಂಡಿಯಾ'ಮೈತ್ರಿಕೂಟದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ನೇಮಕ ಫಿಕ್ಸ್

ದಿನೇಶ್ ಕಾರ್ತಿಕ್- ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 2004 ರಲ್ಲಿ ಭಾರತದ ಪರ ಆಡಿ ಇಂಟರ್​ ನ್ಯಾಷನಲ್ ಕೆರಿಯರ್ ಆರಂಭಿಸಿದ್ದ ಇವರು, ಮೂರು ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಜೊತೆಗೆ ಐಪಿಎಲ್ ​ಗೂ ಗುಡ್ ಬೈ ಹೇಳಿದ್ದಾರೆ.

ಕೇದಾರ್ ಜಾಧವ್- ಭಾರತದ ಪರ 73 ಏಕದಿನ ಪಂದ್ಯಗಳನ್ನಾಡಿರುವ ಸರದಾರ ಕೇದಾರ್ ಜಾಧವ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ಮೂಲಕ 10 ವರ್ಷಗಳ ತಮ್ಮ ಇಂಟರ್​ನ್ಯಾಷನಲ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ.

ವಿರಾಟ್ ಕೊಹ್ಲಿ- ಟಿ20 ವಿಶ್ವಕಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಆದರೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

ರೋಹಿತ್ ಶರ್ಮಾ- ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸಹ ಟಿ20 ವಿಶ್ವಕಪ್ ಮುಕ್ತಾಯದ ನಂತರ ಇದೀಗ ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ತೊಡಗಿಸಿಕೊಂಡಿರುವ ಹಿಟ್​ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್ ​​ಶಿಪ್ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ.

Also Read  40 ಕಡೆ ಗೋಡಾನ್ ಗಳ ಮೇಲೆ ಸಿಬಿಐ ರೈಡ್..! ➤ ಅಕ್ಕಿ ಮತ್ತು ಗೋಧಿ ಮಾದರಿ ಸಂಗ್ರಹ

ರವೀಂದ್ರ ಜಡೇಜಾ- ಟೀಮ್ ಇಂಡಿಯಾದ ಸ್ಟಾರ್ ಆಲ್​ ರೌಂಡರ್ ರವೀಂದ್ರ ಜಡೇಜಾ ಟಿ20 ವಿಶ್ವಕಪ್ ಬಳಿಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಆದರೆ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಆಡಲಿದ್ದಾರೆ.

error: Content is protected !!
Scroll to Top