ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ಮಂಗಳವಾರದಂದು ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ(45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ, ತಾಯಿ, ಹಾಗೂ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Scroll to Top