ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

(ನ್ಯೂಸ್ ಕಡಬ) newskadaba.com ಆ. 27. ಆಹಾರ ಅರಸಿಕೊಂಡು ನಾಡಿಗೆ ಬಂದ ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಳಗಾಮೆಯ ಆಶ್ರಯ ಎಸ್ಟೇಟ್ ಬಳಿ ನಡೆದಿದೆ.

ಭದ್ರಾ ಅಭಯಾರಣ್ಯದಿಂದ ಆಹಾರ ಅರಸಿ ಬಂದಿದ್ದ ಕಾಡಾನೆಯು ಬೇಲಿ ದಾಟುವ ವೇಳೆ ತೋಟಕ್ಕೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Scroll to Top