(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 27. ರಷ್ಯಾ ಮೂಲದ ಖ್ಯಾತ ಸಾಮಾಜಿಕ ಜಾಲತಾಣ ಟೆಲಿಗ್ರಾಮ್ ಭಾರತದಲ್ಲಿ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮನಿಕಂಟ್ರೋಲ್ ನಲ್ಲಿನ ವರದಿಯ ಪ್ರಕಾರ, ಟೆಲಿಗ್ರಾಮ್ ವಿರುದ್ಧ ಕೇಳಿಬಂದಿರುವ ಈ ಆರೋಪಗಳು ಸಾಬೀತಾದರೆ ಭಾರತದಲ್ಲಿ ಟೆಲಿಗ್ರಾಂ ನಿಷೇಧವಾಗುವ ಎಲ್ಲ ಸಾಧ್ಯತೆಗಳಿವೆ. ವರದಿಯಲ್ಲಿರುವಂತೆ ಟೆಲಿಗ್ರಾಂ ಆ್ಯಪ್ ಬಳಕೆ ಮಾಡಿಕೊಂಡು ಸುಲಿಗೆ ಮತ್ತು ಜೂಜಾಟದಂತಹ ಕ್ರಿಮಿನಲ್ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ದುಷ್ಕರ್ಮಿಗಳು ತಮ್ಮ ಕಾನೂನು ಬಾಹಿರ ಚುಟುವಟಿಕೆಗಳನ್ನು ನಡೆಸಲು ಟೆಲಿಗ್ರಾಂ ವೇದಿಕೆಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದು, ಇದು ಸಾಬೀತಾದರೆ ಟೆಲಿಗ್ರಾಂ ಆ್ಯಪ್ ಅನ್ನು ಭಾರತದಲ್ಲಿ ನಿಷೇಧ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.