(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27. ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜನವರಿಯಿಂದ 10,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಮತ್ತು ಮೂರು ಸಾವುಗಳು ವರದಿಯಾಗಿದೆ.
ಓವಿ ಟ್ರ್ಯಾಪ್ ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಓವಿ ಟ್ರ್ಯಾಪ್ ಸಾಧನವು ಸೊಳ್ಳೆಗಳು, ಸೊಳ್ಳೆಗಳ ಮೊಟ್ಟೆ ನಾಶಪಡಿಸಲಿದೆ. ಪ್ರಾಯೋಗಿಕವಾಗಿ ಬಿನ್ನಿಪೇಟೆ ವಾರ್ಡ್ ನ ಗೋಪಾಲಪುರದಲ್ಲಿ 120 ಟ್ರ್ಯಾಪ್ ಗಳನ್ನು ಅಳವಡಿಸಲಾಗಿದೆ. ಇದು ಕೆಲಸ ಮಾಡಿದ್ದೇ ಆದರೆ, ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ನಿಯಂತ್ರಣಕ್ಕೆ ತರಬಹುದು ಎಂದು ಹೇಳಿದರು ಎನ್ನಲಾಗಿದೆ.