ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.c0m ಬೆಳಗಾವಿ, ಆ. 27.   ಜಿಎಸ್‌ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್‌ ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್ ಟಿ ಇದ್ದವರೂ ನಮ್ಮ ಪೋರ್ಟಲ್ ​ಗೆ ಅರ್ಜಿ ಹಾಕಿದ್ದರು. ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್‌ ಟಿ ಇರುವ ಕಾರಣಕ್ಕೆ ಅರ್ಜಿ ತಿರಸ್ಕಾರ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ ಎಂದರು. ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಜೂನ್ ತಿಂಗಳದ್ದು ಕೂಡ ಎಂಬತ್ತು ಸಾವಿರ ಜನರಿಗೆ ತಲುಪಿಲ್ಲ. ಜುಲೈ ಮತ್ತು ಆಗಸ್ಟ್‌ ತಿಂಗಳದ್ದು ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ತಿಳಿಸಿದರು.

Also Read  ಇಂದಿನ (ಸೆ.26) ದಿನ ಭವಿಷ್ಯ

 

error: Content is protected !!
Scroll to Top