(ನ್ಯೂಸ್ ಕಡಬ) newskadaba.c0m ದೆಹಲಿ, ಆ. 27. ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠವು, ಕವಿತಾ ಅವರು ಸುಮಾರು ಐದು ತಿಂಗಳಿನಿಂದ ಕಸ್ಟಡಿಯಲ್ಲಿದ್ದಾರೆ. ಈ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅವರ ವಿರುದ್ಧ ತನಿಖೆ ಪೂರ್ಣಗೊಂಡಿದೆ. ಈ ಹಗರಣದಲ್ಲಿ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ ಸಾಕ್ಷಿ ಇದೆ ಎಂಬುದನ್ನು ತೋರಿಸಲು ಇಡಿ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ಕೇಳಿದೆ. ಕವಿತಾ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಜಮೀನು ಮಂಜೂರು ಮಾಡುವಂತೆ ಕೋರಿದ್ದಾರೆ. ಆಕೆಯ ವಿರುದ್ಧದ ತನಿಖೆಯನ್ನು ಎರಡು ಸಂಸ್ಥೆಗಳು ಪೂರ್ಣಗೊಳಿಸಿವೆ ಎಂದು ವರದಿ ತಿಳಿಸಿದೆ.