ಭೂ ಅಕ್ರಮ ಸಂಪೂರ್ಣ ಕಡಿವಾಣಕ್ಕೆ ರಾಜ್ಯ ಸರ್ಕಾರ ಮುಂದು  ಆರ್‌ಟಿಸಿಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಆರ್‌ಟಿಸಿಗೆ ಆಧಾರ್‌ ಜೋಡಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ. ವಿಕಾಸಸೌಧದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ. ಇದರಿಂದ ವಂಚನೆಗೊಳಗಾದವರು ಹಲವು ವರ್ಷಗಳಿಂದ ಕೋರ್ಟ್‌ ಕಚೇರಿಗೆ ಅಲೆಯುವಂತಾಗಿದೆ.

ಇಂತಹ ಪ್ರಕರಣಗಳನ್ನು ತಡೆಯುವ ಹಾಗೂ ಜನಸಾಮಾನ್ಯರ ಪಾಲಿಗೆ ಅವರ ಜಮೀನಿನ ಹಕ್ಕನ್ನು ರಕ್ಷಿಸಿ ಅಧಿಕೃತಗೊಳಿಸುವ ಉದ್ದೇಶದಿಂದ ಆಧಾರ್‌ ಜೋಡಣೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು ಎನ್ನಲಾಗಿದೆ.  ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ದೋಚುವವರ ಕೃತ್ಯಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಹಲವು ಜನರಿಂದ ಕೇಳಿಬಂದಿತ್ತು. ಇತ್ತೀಚೆಗೆ ಹಲವು ಶಾಸಕರು, ಸಚಿವರು ಹಾಗೂ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಗ್ಗೆ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದ್ದರು. ಇದೇ ಕಾರಣಕ್ಕೆ ಆಧಾರ್‌ ಜೋಡಣೆ ಅಭಿಯಾನಕ್ಕೆ ಮೂರು ತಾಲೂಕುಗಳಲ್ಲಿ ಒಂದು ತಿಂಗಳ ಕಾಲ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು.

Also Read  'ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ' ➤ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

 

 

error: Content is protected !!
Scroll to Top