ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಟಾನಗರ, ಆ. 28. ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿ ಟ್ರಕ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದುಬಂದಿದೆ.

ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಹೆಚ್ಚಿನ ವಿವರಗಳು ಇನ್ನೂ ದೊರೆತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರನ್ನು ಹವಾಲ್ದಾರ್ ನಖತ್ ಸಿಂಗ್, ನಾಯಕ್ ಮುಖೇಶ್ ಕುಮಾರ್ ಮತ್ತು ಗ್ರೆನೇಡಿಯರ್ ಆಶಿಶ್ ಯೋಧರು ಎಂದು ಗುರುತಿಸಲಾಗಿದೆ.

Also Read  ಸುಳ್ಯದಲ್ಲಿ ಯುವಕನ ಮೇಲೆ ಗುಂಡು ಹಾರಾಟ ಪ್ರಕರಣ ➤ ನಾಡ ಪಿಸ್ತೂಲು ಸಹಿತ ಮೂವರ ಬಂಧನ

 

error: Content is protected !!
Scroll to Top