(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದ್ದು, ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಚೋಮರವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಕಡಬ ಠಾಣೆಯಲ್ಲಿ ಅ.ಕ್ರ :85/2024.ಕಲಂ: 281,106 BNS-2023 ರಂತೆ ಪ್ರಕರಣ ದಾಖಲಾಗಿದೆ.