(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸೌಲಭ್ಯ ನೀಡಿರುವ ಕುರಿತು ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಇದೀಗ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಆದೇಶ ನೀಡಿದೆ. ಇದರ ಬೆನ್ನಲ್ಲೇ 24 ನೇ ಎಸಿಎಂಎಂ ನ್ಯಾಯಾಲಯ ಒಬ್ಬೊಬ್ಬ ಆರೋಪಿಗಳನ್ನು ಒಂದೊಂದು ಕಡೆ ಜೈಲಿಗೆ ಶಿಫ್ಟ್ ಮಾಡಲು ಅನುಮತಿ ನೀಡಿದೆ. ಈ ಮೂಲಕ ಡಿ ಗ್ಯಾಂಗ್ ದಿಕ್ಕಾಪಾಲಾಗಿದ್ದಾರೆ.
ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ – ದಿಕ್ಕಾಪಾಲಾದ ಡಿ ಗ್ಯಾಂಗ್
