ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಲಂಡನ್ ಗೆ ಹಾರಿದ ಅಣ್ಣಾಮಲೈ; ತಮಿಳುನಾಡು ಬಿಜೆಪಿ ಅಧ್ಯಕ್ಷ ಪಟ್ಟ ಯಾರಿಗೆ..?

(ನ್ಯೂಸ್ ಕಡಬ) newskadaba.com ತಮಿಳುನಾಡು, ಆ. 28. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ತಮ್ಮ ಉನ್ನತ ಶಿಕ್ಷಣಕ್ಕಾಗಿ ಬ್ರಿಟನ್​ನ ಆಕ್ಸ್​ಫರ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಫೆಲೋಶಿಪ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಬದಲಾವಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇಂಗ್ಲೆಂಡ್‌ ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ‘ಅಂತರರಾಷ್ಟ್ರೀಯ ರಾಜಕಾರಣ’ದ ಕುರಿತು ಪ್ರತಿ ವರ್ಷ ನೀಡುವ ಪ್ರಮಾಣಪತ್ರ ಕೋರ್ಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಈ ಕೋರ್ಸ್‌ಗಾಗಿ ಲಂಡನ್‌ಗೆ ತೆರಳುತ್ತಿರುವ ಅಣ್ಣಾಮಲೈ ಜನವರಿ ತಿಂಗಳವರೆಗೆ ಅಲ್ಲಿಯೇ ತಂಗಿ ಓದಲಿದ್ದಾರೆ. ಇದರಿಂದಾಗಿ ಸುಮಾರು 4 ತಿಂಗಳು ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಇಲ್ಲದಂತಾಗಿದೆ. ಹೀಗಾಗಿ ತಮಿಳುನಾಡು ಬಿಜೆಪಿಗೆ ಹಂಗಾಮಿ ಅಧ್ಯಕ್ಷರಾಗಿ ಯಾರನ್ನು ನೇಮಿಸಬಹುದು ಎಂದು ಬಿಜೆಪಿ ರಾಷ್ಟ್ರೀಯ ನಾಯಕತ್ವ ಚಿಂತನೆ ನಡೆಸಿದೆ.

Also Read  ಅನ್ನಭಾಗ್ಯ- ಬಿಪಿಎಲ್ ದಾರರಿಗೆ ಹಣದ ಬದಲು ರಾಗಿ ಮತ್ತು ಗೋಧಿ ಕಿಟ್..!

error: Content is protected !!
Scroll to Top