ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28.  ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಸೋಮವಾರ ನಡೆದಿದೆ.

ಮನೆಗೆ ಹಾನಿಯಾಗಿದ್ದು, ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ ಸಲ್ಲಿಸಿದ್ದರು. ಆದರೆ ಯಾರೂ ಸ್ಪಂದನೆ ನೀಡಿರುವುದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ ಎನ್ನಲಾಗಿದೆ.

 

Scroll to Top