ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, . 28. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರದಂದು  ಮಾಡಲಾಗಿದ್ದು, ಮಹಿಳೆ ಎಂಬುದನ್ನು ಪರಿಗಣಿಸಿ ಪವಿತ್ರಾ ಗೌಡ ಅವರಿಗೆ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ.

ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದೆ. ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಪವಿತ್ರಾ ಪರ ವಾದ ಮಂಡಿಸಿದ ವಕೀಲರು, ರೇಣುಕಾಸ್ವಾಮಿ ಕಪಾಳಕ್ಕೆ ಪವಿತ್ರಾ ಹೊಡೆದಿದ್ದಾರೆಂದು ಆರೋಪಿಸಲಾಗಿದೆ. ಆದರೆ ಆಕೆ ಕೊಲೆಯ ಒಳಸಂಚಿನ ಭಾಗ ಎನ್ನಲಾಗುವುದಿಲ್ಲ ಎಂದಿದ್ದಾರೆ. ಇನ್ನು ಜಾಮೀನು ಅರ್ಜಿಯ ವಿಚಾರಣೆಯು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ಮಧ್ಯಾಹ್ನ 2.45ಕ್ಕೆ ವಿಚಾರಣೆ ನಡೆಸಲಾಗುತ್ತದೆ.

error: Content is protected !!
Scroll to Top