ಕಡಬ: ಶಾಲಾ ಕಟ್ಟಡ ಕುಸಿತ – ಮುಖ್ಯೋಪಾಧ್ಯಾಯ ಹಾಗೂ ಜಿ.ಪಂ. ಇಂಜಿನಿಯರ್ ಅಮಾನತು

(ನ್ಯೂಸ್ ಕಡಬ) newskadaba.com ಕಡಬ, ಆ. 28. ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿದ್ದಾರೆ.

ಶಾಲಾ ಕಟ್ಟಡದ ಕುಸಿದು ಬಿದ್ದು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಎಂಬವರು ಗಾಯಗೊಂಡಿದ್ದರು. ಅದೃಷ್ಟವಶಾತ್ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಮೈದಾನದಲ್ಲಿ ಇದ್ದುದರಿಂದ ಭಾರೀ ಅನಾಹುತ ತಪ್ಪಿದೆ. ಶಾಲಾ ಕಟ್ಟಡದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅಗೆಯುವ ಯಂತ್ರ ಬಳಸಿ ಟ್ರೆಂಚ್ ತೋಡುತ್ತಿದ್ದ ವೇಳೆ ಕುಸಿತ ಸಂಭವಿಸಿದೆ. ಇಬ್ಬರು ವಿದ್ಯಾರ್ಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು, ಆದರೆ ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ, ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ ಹಾಗೂ ಇತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  "ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು" - ಡಾ. ಚೂಂತಾರು

Nk

error: Content is protected !!
Scroll to Top