ಯಕ್ಷಗಾನ ಕಲೆಗೆ ಅಪಚಾರ   ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28. ಯಕ್ಷಗಾನದ ವೇಷಭೂಷಣ ತೊಟ್ಟು, ಬಿಕ್ಷಾಟನೆಗೈದು ಯಕ್ಷಗಾನ ಕಲೆಗೆ ಅಪಚಾರವೆಸಗಲಾಗುತ್ತಿದ್ದು, ಈ ದಂಧೆಯನ್ನು ನಿಷೇಧಿಸುವಂತೆ ಆಗ್ರಹಿಸಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದೆ.

ವಿಶ್ವವ್ಯಾಪಿ ಕಲೆಯಾಗಿ ಪ್ರಚಲಿತದಲ್ಲಿರುವ ಯಕ್ಷಗಾನ ಕಲೆಗೆ ಅದರದ್ದೇ ಆದ ಘನತೆ, ಗಾಂಭೀರ್ಯತೆ ಇದ್ದು, ಕರಾವಳಿ ಜಿಲ್ಲೆಯ ಶ್ರೇಷ್ಠ ಕಲೆಯಾಗಿದೆ. ಶ್ರೀಕೃಷ್ಣ ಜನ್ಮಾಷ್ಠಮಿ, ಶ್ರೀ ಗಣೇಶೋತ್ಸವ ಹಾಗೂ ನವರಾತ್ರಿಯ ಸಂದರ್ಭದಲ್ಲಿ ಯಕ್ಷಗಾನ ವೇಷಭೂಷಣವನ್ನು ಧಾರಣೆ ಮಾಡಿಕೊಂಡು ಹಗಲಿಡಿ ಬಿಕ್ಷಾಟನೆಗೈಯುತ್ತಿರುವುದಲ್ಲದೆ ಅಪಚಾರವಾಗುವ ರೀತಿಯಲ್ಲಿ ವರ್ತಿಸಲಾಗುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ. ಇದು ಯಕ್ಷಗಾನದಲ್ಲಿ ಅನೇಕ ವರ್ಷದಿಂದ ದುಡಿಯುವ ಹಿರಿಯ ಮತ್ತು ಕಿರಿಯ ಯಕ್ಷಗಾನ ಕಲಾವಿದರಿಗೆ ಮನಸ್ಸಿಗೆ ನೋವು ಮತ್ತು ಬೇಸರವನ್ನು ತರಿಸಿದೆ. ಮುಂದಿನ ದಿನಗಳಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಯಕ್ಷಗಾನದ ವೇಷಭೂಷಣತೊಟ್ಟು, ಮುಖಕ್ಕೆ ಬಣ್ಣಬಳಿದು, ಕಾಲಿಗೆ ಗೆಜ್ಜೆಕಟ್ಟಿ ಬೀದಿ,ಬೀದಿ ಅಲೆದು ಬಿಕ್ಷಾಟನೆ ಮಾಡುವುದನ್ನು ನಿಷೇಧಿಸುವಂತೆ ಯಕ್ಷಗಾನ ಕಲಾವಿದ ಸರಪಾಡಿ ಆಶೋಕ್ ಶೆಟ್ಟಿ ಅವರ ನಿಯೋಗ ಸಮಸ್ತ ಯಕ್ಷಗಾನ ಕಲಾವಿದರು ಮತ್ತು ಯಕ್ಷ ಪ್ರೇಮಿಗಳ ಪರವಾಗಿ ಮನವಿ ಮೂಲಕ ಒತ್ತಾಯಿಸಿದೆ ಎಂದು ವರದಿ ತಿಳಿಸಿದೆ.

Also Read  'ಜಲ್ಲಿಕಟ್ಟು' ಮತ್ತು ಎತ್ತಿನಗಾಡಿ ಓಟದ ಸ್ಪರ್ಧೆಗಳಿಗೆ ಅವಕಾಶ ಪ್ರಶ್ನಿಸಿ ಅರ್ಜಿ ಸಲ್ಲಿಕೆ ➤ ಇಂದು ಸುಪ್ರೀಂ ಕೋರ್ಟ್ ತೀರ್ಪು ?

 

error: Content is protected !!
Scroll to Top