ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಹುದ್ದೆಗೆ ಝಹೀರ್ ಖಾನ್ ನೇಮಕ

(ನ್ಯೂಸ್ ಕಡಬ) newskadaba.com ಮುಂಬೈ, ಆ. 28. ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿ ಟೀಮ್ ಇಂಡಿಯಾದ ಮಾಜಿ ವೇಗಿ ಝಹೀರ್ ಖಾನ್ ಆಯ್ಕೆಯಾಗಿದ್ದಾರೆ.

2018 ರಿಂದ 2022 ರವರೆಗೆ, ಝಹೀರ್ ಖಾನ್ ಮುಂಬೈ ಇಂಡಿಯನ್ಸ್ ತಂಡದ ನಿರ್ದೇಶಕರಾಗಿ ಮತ್ತು ನಂತರ ಜಾಗತಿಕ ಅಭಿವೃದ್ಧಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇದರ ನಡುವೆ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಕೋಚ್ ಆಗಿಯೂ ಕಾಣಿಸಿಕೊಂಡಿದ್ದರು. ಇದೀಗ ಗೌತಮ್ ಗಂಭೀರ್ ಅವರಿಂದ ತೆರವಾಗಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಹುದ್ದೆಗೆ ಝಹೀರ್ ಖಾನ್ ಅವರನ್ನು ನೇಮಿಸಲಾಗಿದೆ. ಗಂಭೀರ್ ಐಪಿಎಲ್ 2022-23 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸಿದ್ದರು ಎನ್ನಲಾಗಿದೆ.

Also Read  ಅಕ್ರಮವಾಗಿ ಸಾಗಿಸುತ್ತಿದ್ದ 30 ಕೋಣಗಳ ರಕ್ಷಣೆ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

 

error: Content is protected !!
Scroll to Top