(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದ ಸೂಟರ್ ಪೇಟೆಯ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ. 23ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯ ಎದುರಿನ ಬಾಗಿಲನ್ನು ತೆರೆದು ಲಾಕರ್ನಲ್ಲಿದ್ದ 25 ಗ್ರಾಂ ಚಿನ್ನಾಭರಣ, 47,000 ರೂ. ನಗದು ಸಹಿತ ಅಂದಾಜು 1.47 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.






