ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ಹಿರಿಯ ಐಪಿಎಸ್‌ ಅಧಿಕಾರಿ ಬಿ. ಶ್ರೀನಿವಾಸನ್‌ ಅವರನ್ನು ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಶ್ರೀನಿವಾಸನ್‌ ಅವರು ಬಿಹಾರ ಕೆಡರ್ ನ 1992ರ ಬ್ಯಾಚ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.

‘ಶ್ರೀನಿವಾಸನ್‌ ಅವರನ್ನು ಎನ್‌ಎಸ್‌ಜಿ ಮಹಾ ನಿರ್ದೇಶಕರನ್ನಾಗಿ ನೇಮಿಸಲು ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ. ಅವರ ಅಧಿಕಾರ ಅವಧಿಯು ‘2027ರ ಆಗಸ್ಟ್‌ 31ರ ವರೆಗೆ ಇರಲಿದೆ’ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಿದೆ.

Also Read  ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾಗಿ ತುಳಸಿ ಗಬ್ಬಾರ್ಡ್ ​ನೇಮಕ

 

error: Content is protected !!
Scroll to Top